ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ

ಬೆಂಗಳೂರು : ಈ ಬೇಸಿಗೆಯ ಆರಂಭದಲ್ಲೇ ಅನುಭವಕ್ಕೆ ಬರುತ್ತಿರುವ ವಿಪರೀತ ಸೆಖೆಗೂ ಮುಂದಿನ ಮಳೆಗಾಲಕ್ಕೂ ನಂಟು ಇದೆ ಎನ್ನುತ್ತಾರೆ ಹವಾಮಾನ ತಜ್ಞರು. ಉಷ್ಣತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ವಿಪರೀತ ಉಷ್ಣತೆಯ ಪರಿಣಾಮವಾಗಿ ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6 ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. ಕರ್ನಾಟಕದಲ್ಲಿ ಬಹುತೇಕ ಎಪ್ರಿಲ್‌ ಉತ್ತರಾರ್ಧದಲ್ಲೇ ಮಳೆ ಶುರುವಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.

1901ರ ಬಳಿಕ ಕಳೆದ ಫೆಬ್ರವರಿಯು ಅತ್ಯಂತ ಬಿಸಿಲಿನಿಂದ ಕೂಡಿತ್ತು. ಈ ರೀತಿ ಹವಾಮಾನ ವಾತಾವರಣದಿಂದ ಮುಂಗಾರು ಪೂರ್ವ ಮಳೆ ಅವಧಿಗೂ ಮುನ್ನವೇ ಬರಲಿದೆ. ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತ ಮಾರ್ಚ್‌ ಮಧ್ಯದಲ್ಲಿ ರಚನೆಯಾಗುತ್ತದೆ. ಈ ವರ್ಷ ಬೇಗ ಸೃಷ್ಟಿಯಾಗಿದೆ. ಹೆಚ್ಚಿರುವ ಉಷ್ಣಾಂಶವು ಇದಕ್ಕೆ ಕಾರಣವಾಗಿದೆ ಎಂದು ಸ್ಕೈಮೆಟ್‌ನ ಹವಾಮಾನ ತಜ್ಞ ಮಹೇಶ್‌ ಮಲಾವತ್‌ ಹೇಳಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top