ನವದೆಹಲಿ: ಐವತ್ತು ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಣಯ ಮಂಡನೆ ಮಾಡಿದೆ.
ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯಿಂದ ಸಂವಿಧಾನದ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಂಡ ಮತ್ತು ಊಹಿಸಲಾಗದ ಭಯಾನಕತೆಗಳಿಗೆ ಒಳಗಾದವರಿಗೆ ಗೌರವ ಸಲ್ಲಿಕೆಯ ಸಲುವಾಗಿ 2 ನಿಮಿಷಗಳ ಮೌನಾಚರಣೆಯನ್ನು ಆಚರಿಸಲಾಯಿತು.
ಆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡಿದ್ದು, ತುರ್ತು ಪರಿಸ್ಥಿತಿಯ ಅತಿರೇಕಗಳಿಗೆ ಖಂಡನೆ ವ್ಯಕ್ತಪಡಿಸುವ ನಿರ್ಣಯವನ್ನು ಕೇಂದ್ರ ಸರ್ಕಾರಗಸದ ಸಚಿವ ಸಂಪುಟದಲ್ಲಿ ಅಂಗೀಕರಿಸಿದ್ದಾಗಿಯೂ ತಿಳಿಸಿದ್ದಾರೆ.
ಕಳೆದ ವರ್ಷ ಪ್ರಧಾನಿ ಮೋದಿ ಸರ್ಕಾರ ಈ ದಿನದ ಕರಾಳತೆಯನ್ನು ಯುವ ಜನರಿಗೆ ಅರಿವಾಗಿಸುವ ನಿಟ್ಟಿನಲ್ಲಿ ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲು ಕರೆ ನೀಡಿದ್ದರು.
























