ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದಕ್ಕೆ ಕಾರಣ ಕೆಂಪೇಗೌಡರು : ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ಆಧುನಿಕ ಬೆಂಗಳೂರಿನ ನಿರ್ಮಾತೃಗಳಾದ ಕೆಂಪೇಗೌಡರು ದಕ್ಷ, ದೂರದೃಷ್ಚಿಯಿದ್ದ ಒಬ್ಬ ಆಡಳಿತಗಾರ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರ ಜಯಂತಿಯ ಹಿನ್ನೆಲೆ ವಿಧಾನಸೌಧದ ಪೂರ್ವದಿಕ್ಕಿನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದ್ದಾರೆ.

ಕೆಂಪೇಗೌಡ ಜಯಂತಿಯನ್ನು ಸರ್ಕಾರವು ಕೆಂಪೇಗೌಡ ಪ್ರಾಧಿಕಾರ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಆಚರಣೆ ಮಾಡುತ್ತಿದೆ. ಇಂದು ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ ಎಂದರೆ ಅದಕ್ಕೆ ಅಡಿಪಾಯ ಹಾಕಿಕೊಟ್ಟವರು ಕೆಂಪೇಗೌಡರು ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top