ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ದಸರಾ ಆಚರಣೆಯಲ್ಲಿ ಪ್ರವಾಸಿಗರಿಗೆ ನೂಕುನುಗ್ಗಲು ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ನಾಡ ಹಬ್ಬ ದಸರಾ ವೀಕ್ಷಣೆಗೆ ದೇಶ ವಿದೇಶಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದು ಎಂದು ಆದೇಶಿಸಿದ್ದಾರೆ.
























