ಪುತ್ತೂರು: ಜೀಪು ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡು ಜೀಪು ಚಾಲಕ ಗಾಯಗೊಂಡ ಘಟನೆ ಇಂದು ಮುಕ್ರಂಪಾಡಿ ಬಳಿ ನಡೆದಿದೆ.
ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕ ದೇವಸ್ಯ ನಿವಾಸಿ ಮನೋಜ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ದಾರಿಯಲ್ಲಿ ತೆರಳುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀ ಪ್ರಸಾದ್ ಪಾಣಾಜೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
























