ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್ ರೈ, ಕಾರ್ಯದರ್ಶಿ ಅನ್ನಪೂರ್ಣ ಬಲ್ಲಾಲ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸದಸ್ಯರು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
























