ಅಮರನಾಥ ಯಾತ್ರಿಕರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ

ಶ್ರೀನಗರ: ಅಮರನಾಥ ಯಾತ್ರೆ ಜುಲೈ 3 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪೊಲೀಸ್ ಬಿಗಿ ಭದ್ರತೆ ಆಯೋಜಿಸಲಾಗಿದ್ದು, ತಪಾಸಣೆಗಾಗಿ ಚೆಕ್ ಪೋಸ್ಟ್ ‌ಗಳನ್ನು ನಿರ್ಮಾಣ ಮಾಡಲಾಗಿದೆ.

ಕೆಲ ಸಮಯದ ಹಿಂದೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರ ದಾಳಿಯ ಬಳಿಕ ಅಮರಾನಾಥ ಯಾತ್ರಿಕರ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿದೆ. ಭಕ್ತರಿಗೆ ಸುಗಮ ಯಾತ್ರೆಯ ಅನುಕೂಲ ಒದಗಿಸಿ ಕೊಡಲು ಅರೆಸೇನಾ ಪಡೆಗಳು ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿರುವುದಾಗಿದೆ. 24*7 ರೀತಿಯಲ್ಲಿ ಯಾತ್ರಿಕರಿಗೆ ರಕ್ಷಣೆ ಒಗದಗಿಸಲು ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರು ತಂಗುವ ಹೊಟೇಲ್ ‌ಗಳು, ಪ್ರವಾಸಿಗೃಹಗಳಲ್ಲಿಯೂ ರ್ಯಾಂಡಮ್ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 50 ಸಾವಿರ ಯಾತ್ರಿಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top