ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಇಂದು ನಡೆದಿದೆ.
ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಮೃತಪಟ್ಟ ದ್ವಿಚಕ್ರ ಸವಾರ.
ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಯಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























