ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.





















































 
 

ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಮುಂಜಾನೆ 3.30ರ ಸುಮಾರಿಗೆ ಡಾ.ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನಾರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸೂಪರಿಂಟೆಂಡೆಂಟ್‌ಗಳಿಗೆ, ಹಿರಿಯ ಅಧಿಕಾರಿಗಳಿಗೆ, ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 30 ನಿಮಿಷದಲ್ಲಿ ಎಲ್ಲ ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top