ಬೆಂಗಳೂರು: ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸಿಗರಿಗೆ ಖಡಕ್ ತಾಕೀತು ಮಾಡಿದ್ದಾರೆ.
ಬಾಲಕೃಷ್ಣ ಆಗಲಿ, ಬಿ.ಆರ್. ಪಾಟೀಲ್ ಆಗಲಿ ಯಾರೇ ಆದರೂ ಮಾಧ್ಯಮಗಳ ಮುಂದೆ ಹೋಗಿ ಹೇಳಿಕೆ ನೀಡಬಾರದು ಎಂದು ಅವರು ಖಡಕ್ ಸೂಚನೆ ನೀಡಿದ್ದಾರೆ.
ನಾವು ಸಿಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸುತ್ತೇವೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ಇಕ್ಬಾಲ್ ಹುಸೇನ್ ಅವರಿಗೆ ನೊಟೀಸ್ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
























