ನವದೆಹಲಿ: ಕೇಂದ್ರದ ಪ್ರಧಾನಿ ಮೋದಿ ಸರ್ಕಾರವು ಉತ್ಪಾದನಾ ವಲಯದ ಮೇಲೆ ವಿಶೇಷ ದೃಷ್ಟಿ ಹರಿಸಿದ್ದು, ಎಲ್ಲಾ ವಲಯಗಳಿಗೆ ಸಂಬಂಧಿಸಿದ ಹಾಗೆ ಉದ್ಯೋಗ ಸೃಷ್ಟಿ ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಮಹತ್ವದ ನಿರ್ಣಯವೊಂದನ್ನು ಅನುಮೋದಿಸಿದೆ.
ಉದ್ಯೋಗದ ಅವಕಾಶಗಳು ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚು ಮಾಡಲು 1.07 ಲಕ್ಷ ಕೋಟಿ ರೂ. ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆ ಇದಾಗಿದೆ. ಪಿಎಂ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮುಂದಿನ 2 ವರ್ಷಗಳಲ್ಲಿ 3.5 ಕೋಟಿಗೂ ಅಧಿಕ ಉದ್ಯೋಗಗಳನ್ನು ಸೃಷ್ಟಿ ಮಾಡುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುವ ಗುರಿ ಈ ಯೋಜನೆಯದ್ದಾಗಿದೆ.
























