ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು

ಕನ್ನಡಕ್ಕೆ ತಮಿಳು ತಾಯಿಭಾಷೆ ಎಂದು ಹೇಳಿ ವಿವಾದಕ್ಕೀಡಾಗಿದ್ದ ಕಮಲ ಹಾಸನ್‌

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೆ ಉದ್ಧಟತನ ತೋರಿದ್ದಾರೆ ಎಂದು ದಾವೆಯಲ್ಲಿ ಹೇಳಲಾಗಿದೆ. ಪ್ರಕರಣದ ಸಾಕ್ಷಿಯಾಗಿ ನಟ ಶಿವರಾಜ್ ಕುಮಾರ್ ರನ್ನ ಪರಿಗಣಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.





















































 
 

ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top