ಸಿಎಂ ಬದಲಾವಣೆ ವಿಷಯದಲ್ಲಿ ನನ್ನ ಮಾತಿಗೆ ನಾನು ಬದ್ಧ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ಬೆಂಗಳೂರು: ನನಗೆ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡದಂತೆ ಪಕ್ಷ ನೊಟೀಸ್ ನೀಡಿದೆ. ನಾನು ಬೇರೆಯವರಿಗೂ ಹೇಳುವಂತೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ. ನನ್ನ ಮಾತಿಗೆ ನಾನು ಬದ್ಧ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

ನಾನು ಪಕ್ಷದ ವರಿಷ್ಠರ ಜೊತೆಗೆ ನಾವೆಲ್ಲರೂ ಬದಲಾವಣೆ ಬಯಸುತ್ತಿರುವುದಾಗಿ ಹೇಳಿದ್ದೇನೆ. ಅವರಿಂದಲೂ ನಮಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಅದು ಮನ್ ನಲ್ಲಿನ ಅಶಾ ಭಾವನೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದಿದ್ದಾರೆ.

ನಾನು ಸಿದ್ದರಾಮಯ್ಯ ಅವರ ಅಭಿಮಾನಿ ಹೌದು. ಆದರೆ ಅವರು ಈಗಾಗಲೇ ಎರಡೂವರೆ ವರ್ಷ ಅಧಿಕಾರ ಅನುಭವಿಸಿದ್ದಾರೆ. ಮುಂದಿನ ಎಲೆಕ್ಷನ್ ಗಮನದಲ್ಲಿಟ್ಟುಕೊಂಡು ಡಿ ಕೆ ಶಿವಕುಮಾರ್ ಅವರು ಸಿಎಂ ಆಗುವುದು ಮುಖ್ಯ. ಅವರು ನಮ್ಮ ಜಿಲ್ಲೆಯವರು. ಅವರ ಪರಿಶ್ರಮದಿಂದ ನಾವೆಲ್ಲರೂ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರ ಫಲ‌ ಅವರಿಗೆ ದೊರೆಯಬೇಕು ಎಂದಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top