ಸುಟ್ಟು ಭಸ್ಮವಾದ ಕಾರು, ಚಾಲಕ ಅಪಾಯದಿಂದ ಪಾರು
ಮಂಗಳೂರು: ನಾಯಿಯೊಂದು ಅಡ್ಡ ಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ಗಂಜಿಮಠದಲ್ಲಿ ನಡೆದಿದೆ.
ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಕಾರಿನ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಾರು ಸುಟ್ಟು ಭಸ್ಮವಾಗಿದೆ.
ಕಾರು ಚಾಲಕ ಅಪಾಯದಿಂದ ಪಾರಾಗಿದೆ. ಬೆಂಕಿಗೆ ಆಹುತಿಯಾದ ಟೂರಿಸ್ಟ್ ಕಾರು ಕೊಳಂಬೆ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ್ದಾಗಿದೆ.
























