ಕಡಬ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಡಬ ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಇಂದು (ಜು.3) ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ, ತೋಡುಗಳ ಬಳಿ ಹೋಗುವುದಾಗಲಿ, ವಿದ್ಯುತ್ ಕಂಬದ ಸಮೀಪ ಹೋಗುವುದನ್ನು ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
ಪ್ರಾಕೃತಿಕವಾಗಿ ಯಾವುದೇ ಘಟನೆಗಳು ಸಂಭವಿಸಿದಲ್ಲಿ ಸಾರ್ವಜನಿಕರು ತಕ್ಷಣ ಸಂಬಂಧ ಪಟ್ಟ ಪಂಚಾಯತ್, ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























