ಮುಂಗಾರು ಅಧಿವೇಶನಕ್ಕೂ ಮೊದಲು ನಡೆಯಲಿದೆ ಈ ಸಭೆ
ನವದೆಹಲಿ: ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂಮೊದಲು ಜುಲೈ 19 ರಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆಯಲಿರುವುದಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಿಜಿಜು ಅವರು, ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನವು ಜುಲೈ 21 ರಿಂದ ಆರಂಭವಾಗಲಿದ್ದು, ಆಗಸ್ಟ್ 21 ರ ವರೆಗೆ ನಡೆಯಲಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಆ. 15 ರಂದು ದೇಶದ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಿಂದ ಆ.13 ಮತ್ತು ಆ.14 ರಂದು ಯಾವುದೇ ಕಲಾಪಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಪಹಲ್ಗಾಮ್ ದಾಳಿಯ ನಂತರ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರದ ಪ್ರಥಮ ಅಧಿವೇಶನ ಇದಾಗಿದೆ.
























