ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ.

ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ದತ್ತಾಂಶ ಸುರಕ್ಷತೆ ಬಗ್ಗೆ, ವೈಯುಕ್ತಿಕ ದತ್ತಾಂಶ ಸುರಕ್ಷತೆ ಮಸೂದೆಯ ಜಂಟಿ ಸ್ಥಾಯಿ ಸಮಿತಿ ಸದಸ್ಯರಾಗಿ ನೀತಿ ನಿಯಮಾವಳಿಗಳ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

2019ರ ಜೂನ್ 17 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರೀಯ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಸಂಸತ್ತಿನ 26 ಚರ್ಚೆಗಳಲ್ಲಿ ಧ್ವನಿ ಎತ್ತಿದ್ದು, ಎಲ್ಲ ಅಧಿವೇಶನಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ಸಂಸತ್ತಿನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. 17ನೇ ಲೋಕಸಭೆಯಲ್ಲಿ ಎಲ್ಲ ವಲಯಗಳ ಮೇಲಿನ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹಿತಾಸಕ್ತಿಯ 308 ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಕೇಳಿದ್ದು ( ಕೃಷಿ, ಶಿಕ್ಷಣ, ವಿಮಾನ ಯಾನ, ರೇಲ್ವೆ, ಐಟಿ, ಬಿಟಿ, ಅಂತರಿಕ್ಷ ಕ್ಷೇತ್ರಗಳಿಗೆ ಸಂಬಂಧಿಸಿದಂತೆ) ಈ ಕುರಿತು ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುತ್ತಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top