ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಕೋಟ್ಯಾಂತರ ವಂಚಿಸಿದ ಕುರಿತು ಮಂಗಳೂರು ಪೂರ್ವ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hiruglim Elegant Overseas International (Opc) Private Limited ಹೆಸರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 259 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಸೀವುಲ್ಲಾ ಖಾನ್ ಎಂಬ ಮುಂಬೈ ಮೂಲದ ಆರೋಪಿಯನ್ನು ಬಂಧಿಸಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ತನಿಖೆಯನ್ನು ಮುಂದುವರೆಸಿ ಪ್ರಕರಣದ ಪ್ರಮುಖ ಆರೋಪಿಗಳಾದ ಮುಂಬಯಿಯ ದಿಲ್‍ ಶಾದ್‍ ಅಬ್ದುಲ್‍ ಸತ್ತಾರ್ ಖಾನ್‍ (45)





















































 
 

ಹಾಗೂ ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34) ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

error: Content is protected !!
Scroll to Top