ಪುತ್ತೂರು: ಇಲ್ಲಿನ ಬಿರುಮಲೆ ಬೆಟ್ಟದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಬಂಧಿತ ವ್ಯಕ್ತಿಗಳು.
ಯುವಕರು ಬಿರುಮಲೆ ಗುಡ್ಡೆಯಲ್ಲಿ ಯುವಕ ಹಾಗೂ ಯುವತಿ ಇರುವಾಗ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
























