ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಮೈಸೂರಿನಲ್ಲಿ ಮಂಗಳೂರು ನಗರದ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಧ್ರುವ ಡಿ. ಶೆಟ್ಟಿ ಎಂದು ಗುರುತಿಸಲಾಗಿದ್ದು, ಈತ ಹಾಸನದ ಸಕಲೇಶಪುರದವನು ಎಂದು ತಿಳಿದು ಬಂದಿದೆ.

ಈತನ ಬಗ್ಗೆ ಮಾದಕ ವಸ್ತು ಪೂರೈಕೆ ಆರೋಪದಲ್ಲಿ ಜುಲೈ 2 ರಂದು ಪ್ರಕರಣ ದಾಖಲಾಗಿತ್ತು. ಈಗಾಗಲೇ ಐವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಧಿಸಲಾಗಿದ್ದು, ಇವರೆಲ್ಲರಿಗೂ ಧ್ರುವ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು ಎಂಬುದಾಗಿ ಮೂಲಗಳು ತಿಳಿಸಿವೆ.





















































 
 

ಬಂಧಿತನಿಂದ ಮೊಬೈಲ್ ಫೋನ್, ಬೈಕ್ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

error: Content is protected !!
Scroll to Top