ರದ್ದಾಗಲಿವೆಯೇ ಗ್ಯಾರಂಟಿ ಯೋಜನೆಗಳು?
ಬೆಂಗಳೂರು: ಕರ್ನಾಟಕದಲ್ಲಿನ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ರಸ್ತೆ ಬೇಕು ಎಂದಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ. ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಲಾದ ಮಾಹಿತಿಗಳನ್ನು ತಪ್ಪಾಗಿ ಅರ್ಥೈಸಲಾಗಿರುವುದಾಗಿ ಅವರು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಅಡ್ಡಿಯಾಗಿಲ್ಲ. ಅಭಿವೃದ್ಧಿ ನಡೆಯುತ್ತಲೇ ಇದೆ. ಮುಂದಿನ ವರ್ಷ ರಸ್ತೆ ಅಭಿವೃದ್ಧಿ ಬಗ್ಗೆ ಆದ್ಯತೆ ನೀಡುವುದಾಗಿ ಹೇಳಿದ್ದೇನಷ್ಟೇ. ಇದನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
























