ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು.
ಮಾ.17 ರಂದು ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್ ಉದ್ಘಾಟಿಸಿ ಆಶೀರ್ವಚನ ನೀಡುವರು. ಬಹು | ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಮುಖ್ಯ ಪ್ರಭಾಷಣ ಮಾಡುವರು. ಮಾ.18 ರಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಮ್ಮಲ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು ವಹಿಸಲಿದ್ದು, ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ಮಾಡುವರು. ಮಾ.19 ರಂದು ಸಂಜೆ 5 ಗಂಟೆಗೆ ಸೌಹಾರ್ದ ಸಂಗಮ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಉಪನಾಯಕ ಯು.ಟಿ.ಖಾದರ್, ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮತ್ತಿತರ ಧಾರ್ಮಿಕ, ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ರಾತ್ರಿ 8.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಮಹಾಶೀರ್ವಚನ ನೀಡಲಿದ್ದು, ಪಮ್ಮಲ ಮಸೀದಿ ಖತೀಬ ಶಂಸುದ್ದೀನ್ ದಾರಿಮಿ ಉದ್ಘಾಟಿಸುವರು. ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅಧ್ಯಕ್ಷತೆ ವಹಿಸುವರು. ಇ.ಪಿ.ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡುವರು. ಸಮಾರೋಪದ ಬಳಿಕ ಅನ್ನದಾನ ಸೇವೆ ನಡೆಯಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಮಾಅತ್ ಕಮಿಟಿ ಉಪಾಧ್ಯಕ್ಷ ಪಕ್ರುದ್ದೀನ್ ಹಾಜಿ, ಖತೀಬ ಶಂದುದ್ದೀನ್ ದಾರಿಮಿ, ಕಾರ್ಯದರ್ಶಿ ಅಲಿಕುಂಞಿ ಹಾಜಿ, ಮಾಜಿ ಖಜಾಂಚಿ ಆದಂ ಹಾಜಿ ಉಪಸ್ಥಿತರಿದ್ದರು.