ರಿಯೋ ಡಿ ಜನೈರೋ: ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಅವರು ಹವಮಾನ ಬದಲಾವಣೆ ಸೇರಿದಂತೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಗಮನ ಸೆಳೆದಿದ್ದಾರೆ.
ಮುಂದಿನ ವರ್ಷ ಬ್ರಿಕ್ಸ್ ಶೃಂಗಸಭೆಯು ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆ ಸಂದರ್ಭದಲ್ಲಿ ಮಾನವೀಯತೆಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಜಿ-20 ಅಧ್ಯಕ್ಷತೆಯ ಕಾರ್ಯಸೂಚಿಯಂತೆ ಬ್ರಿಕ್ಸ್ ಶೃಂಗಸಭೆಯಲ್ಲೂ ಮಾನವೀಯತೆ ಭಾರತದ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಾಂತ್ರಿಕ ವಿಷಯಗಳ ವರ್ಗಾವಣೆ ಮತ್ತು ಆರ್ಥಿಕ ನೆರವಿನ ವಿನಃ ಹಣಕಾಸಿನ ಮಾತುಕತೆ ಸೀಮಿತವಾಗಿರಲಿದೆ. ಅಭಿವೃದ್ಧಿ ಹೊಂದಿದ ದೇಶಗಳಿಗೆ ಈ ವಿಷಯದಲ್ಲಿ ಜವಾಬ್ದಾರಿ ಹೆಚ್ಚು. ಹಲವು ಸಮಸ್ಯೆಗಳ ಕಾರಣಕ್ಕೆ ಆಹಾರ, ಇಂಧನ, ರಸಗೊಬ್ಬರ ಮತ್ತು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಎಲ್ಲಾ ರಾಷ್ಟ್ರಗಳನ್ನು ನಾವು ಜೊತೆಯಾಗಿ ಕರೆದೊಯ್ಯಬೇಕು. ಭಾರತದ ಬ್ರಿಕ್ಸ್ ಅಧ್ಯಕ್ಷೆಯಲ್ಲಿ ಎಲ್ಲರೊಂದಿಗೆ ಸಹಕಾರ, ಸುಸ್ಥಿರತೆ ಹಾಗೂ ನಾವೀನ್ಯತೆಯತ್ತ ಚಿತ್ತ ಹರಿಸುವುದಾಗಿ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.
























