ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಪುತ್ತೂರು: ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಮಂಗಳವಾರ ಪುತ್ತೂರು ಹೊರವಲಯದ ನೆಹರು ನಗರದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಬೆಳಗ್ಗೆ  ತನ್ನ ತಾಯಿಯೊಂದಿಗೆ  ನೆಹರೂ ನಗರ ಜಂಕ್ಷನ್ ನಲ್ಲಿ  ಬಸ್ಸಿಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು  ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು

ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 ಕಲಂ: 126(2), 74, 115(2), 353(2) BNS 2023, 8 POCSO 2012  ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.





















































 
 
error: Content is protected !!
Scroll to Top