ರಿಡೋ ಡಿ ಜನೈರೋ: ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಯೋತ್ಪಾದನೆಗೆ ಸಂಬಂಧಿಸಿದ ಹಾಗೆ ದ್ವಂದ್ವ ನಿಲುವುಗಳಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಉಗ್ರವಾದಕ್ಕೆ ಸಂಬಂಧಿಸಿದ ಹಾಗೆ ದ್ವಿಮುಖ ನೀತಿಗಳಿಗೆ ಯಾವುದೇ ಅವಕಾಶ ಇಲ್ಲ. ಭಾರತ ಮತ್ತು ಬ್ರೆಜಿಲ್ ಈ ಎರಡೂ ರಾಷ್ಟ್ರಗಳು ಉಗ್ರವಾದವನ್ನು ಮತ್ತು ಅದಕ್ಕೆ ಬೆಂಬಲ ನೀಡುವವರನ್ನು ಬಲವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧವನ್ನು ಪ್ರಸ್ತುತ ಇರುವ 13 ಶತಕೋಟಿ ಡಾಲರ್‌ಗಳಿಂದ 20 ಶತಕೋಟಿ ಡಾಲರ್‌ಗಳಿಗೆ ಮುಂದಿನ ಐದು ವರ್ಷಗಳಲ್ಲಿ ಏರಿಕೆ ಮಾಡಲು ಪ್ರಯತ್ನ ನಡೆಸಲಾಗುವುದು. ಎರಡೂ ರಾಷ್ಟ್ರಗಳ ನಡುವಿನ ರಕ್ಷಣಾ ಸಹಕಾರ ಅಭಿವೃದ್ಧಿ ಹೊಂದುತ್ತಿದ್ದು, ರಕ್ಷಣಾ ಉತ್ಪಾದನೆಗಳು ಕೈಗಾರಿಕೆಗಳನ್ನು ಸಂಪರ್ಕಿಸುವತ್ತ ಸಾಗುತ್ತಿವೆ. ಆಹಾರ, ಕೃಷಿ, ತಂತ್ರಜ್ಞಾನ ಸೇರಿದಂತೆ ಎಲ್ಲಾ ವಲಯಗಳಲ್ಲಿಯೂ ಎರಡೂ ರಾಷ್ಟ್ರಗಳ ಸಹಕಾರ ವೃದ್ಧಿಯಾಗುತ್ತಿದೆ ಎಂದು ಅವರು ನುಡಿದಿದ್ದಾರೆ.
ಇದೇ ಸಂದರ್ಭದಲ್ಲಿ ಪಾಕಿಸ್ತಾನ ಭಾರತದ ಪಹಲ್ಗಾಮ್‌ನಲ್ಲಿ ನಡೆಸಿದ ದಾಳಿಗೆ ಸಂಬಂಧಿಸಿದ ಹಾಗೆ ಬ್ರೆಜಿಲ್ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಅವರು ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
























