ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ

ಪುತ್ತೂರು: ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ಸಮಾಜ ಸುಧಾರಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರು. ಅವರು ಭಾರತದ ಏಕತೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು..ಅವರ ರಾಷ್ಟ್ರೀಯತೆ, ಸಂಘಟನಾ ಕೌಶಲ್ಯ ಮತ್ತು ಸಮಾಜ ಸುಧಾರಣಾ ಪ್ರಯತ್ನಗಳು ಭಾರತದ ಸ್ವಾತಂತ್ರ್ಯ ಮತ್ತು ಏಕತೆಗೆ ಮಹತ್ವದ ಕೊಡುಗೆ ನೀಡಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ಸಂಸ್ಕಾರ ಪರಿವೀಕ್ಷಣಾ ಪ್ರಮುಖರಾದ ಮೀನಾಕ್ಷಿ ಭಗಿನಿ ಹೇಳಿದರು.

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಡಾ.ಕೇಶವ ಬಲಿರಾಮ್‍ ಹೆಡ್ಗೆವಾರ್‍ ಕುರಿತು ಮಾತನಾಡಿದರು.

ಶಿಸ್ತು ಮತ್ತು ರಾಷ್ಟ್ರೀಯ ಸ್ವರೂಪವನ್ನು ಹೊಂದಿರುವ ಒಂದು ಸಾಂಸ್ಕೃತಿಕ ಒಕ್ಕೂಟವನ್ನು ಸ್ಥಾಪಿಸುವ ಉದ್ದೇಶದೊಂದಿಗೆ 1925 ರ ವಿಜಯದಶಮಿಯಂದು ಸ್ಥಾಪಿತವಾದ ಆರ್‌ಎಸ್‌ಎಸ್ ಇಂದಿಗೆ ದೇಶದ ಬಲಿಷ್ಠ ಸಂಘಟನೆಯಾಗಿ ದೇಶಕ್ಕೆ ಉತ್ತಮ ಕಾರ್ಯಕರ್ತರನ್ನು, ಉತ್ತಮ ನೇತಾರರನ್ನು ಕೊಟ್ಟಿದೆ. ಸಂಘವು ಇಡೀರಾಷ್ಟ್ರವನ್ನು ಮೌಲ್ಯಾಧಾರಿತ, ವೈಭವಯುತ, ಸವಾಂಗೀಣ ಉನ್ನತಿಯ ದಾರಿಯಲ್ಲಿ ಕೊಂಡುಹೋಗುವ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ ಎಂದರು.





















































 
 

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಪ್ರಥಮ ವಿಜ್ಞಾನ ವಿಭಾಗದ ಜೀವಿತಾ ಸ್ವಾಗತಿಸಿ, ವಂದಿಸಿದರು.

error: Content is protected !!
Scroll to Top