ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ

ರಾಜಸ್ಥಾನ: ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರಾಜಸ್ಥಾನದ ಚುರುವಿನ ಬನೋಡಾ ಗ್ರಾಮದ ಬಳಿ ಪತನಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ.

ಜಿಲ್ಲಾಧಿಕಾರಿ ಅಭಿಷೇಕ್ ಸುರಾನ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತದ ಪರಿಣಾಮ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ತಾವೇ ನಂದಿಸಲು ಪ್ರಯತ್ನಿಸಿದೆವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.





















































 
 
error: Content is protected !!
Scroll to Top