ಸುಳ್ಯ: ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಆಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರನ್ನು ನೋಡದೆ ತುಳಿದಿದ್ದರು. ವಿದ್ಯುತ್ ಆಘಾತಕ್ಕೆ ಒಳಗಾದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.
ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

