ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಶಾಮೀಲಾಗಿರುವ ಆರೋಪಿ
ಉಡುಪಿ: ಉಡುಪಿ ಭಾಗದಲ್ಲಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಕುಖ್ಯಾತ ಗರುಡ ಗ್ಯಾಂಗಿನ ಓರ್ವ ಸದಸ್ಯನನ್ನು ಪೊಲೀಸರು ಬಂಧಿಸಿ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದರು.
ಕುಖ್ಯಾತ ಗರುಡ ಗ್ಯಾಂಗ್ನ ಸಕ್ರಿಯ ಸದಸ್ಯನಾಗಿರುವ ಕಬೀರ್ 2005ರಿಂದ ಕೊಲೆ, ಕೊಲೆಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿದ್ದಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿವೆ.
ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿವೆ. ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
























