ಮೈಸೂರು: ನಮ್ಮ ಗಮನಕ್ಕೆ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ವಿಷಯಗಳನ್ನು ತಂದಿದ್ದರೆ ಇಷ್ಟು ಗೊಂದಲಗಳು ಸೃಷ್ಟಿಯಾಗುತ್ತಿರಲಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅವರವರೇ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದರು. ಏನು ಒಪ್ಪಂದ ಆಗಿದೆ ಎನ್ನುವುದು ನಮಗೆ ಗೊತ್ತಿಲ್ಲ. ಇದರಿಂದಲೇ ಗೊಂದಲಗಳು ಆರಂಭವಾಯಿತು. ಈಗ ಎಲ್ಲವೂ ತಿಳಿಯಾಗಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಅಭಿಪ್ರಾಯ ಹೇಳಲು ಹಿರಿಯರು – ಕಿರಿಯರು ಎನ್ನುವ ಬೇಗ ಭಾವ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆಯೂ ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳಿದ್ದರು. ಈಗಲೂ ಅದನ್ನೇ ಮತ್ತೆ ಹೇಳಿದ್ದಾರೆ. ಬೇರೆಯವರಿಗೆ ಅವಕಾಶ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಮುಂದೆ ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನೀಡುವ ಗುರಿ ಇದೆ. ಎಲ್ಲಾ ಬೆಳವಣಿಗೆಗಳೂ ಮಾಧ್ಯಮಗಳಿಗೆ ತಿಳಿಯುತ್ತದೆ ಎಂದು ನುಡಿದಿದ್ದಾರೆ.
























