ಬೆಂಗಳೂರು: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.
ನಾನು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿಗಮ ಮಂಡಳಿಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡುವುದಕ್ಕೆ ಸಂಬಂಧಿಸಿದ ಹಾಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಜೊತೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರುಗಳನ್ನೇ ನಿಗಮ ಮಂಡಳಿ ಅಧ್ಯಕ್ಷರುಗಳನ್ನಾಗಿ ಮಾಡುವ ಬಗ್ಗೆ ಚರ್ಚಿಸಿದ್ದು, ಈ ನೇಮಕ ಪೂರ್ಣಗೊಂಡಿಲ್ಲ. ಸುರ್ಜೇವಾಲಾ ಅವರು ಜುಲೈ 16 ಕ್ಕೆ ಮತ್ತೆ ಬೆಂಗಳೂರಿಗೆ ಬರಲಿದ್ದು, ಆಗ ನಾವು ಎಲ್ಲಾ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.
























