ಬೆಳಾಲು ಯುವತಿಯ ಶವ ಕೆರೆಯಲ್ಲಿ ಪತ್ತೆ

ಬೆಳಾಲು: ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿಯ ಶವ ಅನುಮಾನಾಸ್ಪದವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ.

ಕುಕ್ಕೊಟ್ಟು ನಾಗೇಶ್ ಎಂಬವರ ಮಗಳು ವೀಣಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ವೀಣಾರವರ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ವೀಣಾ ಮೇ 10 ರಂದು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ಆ ನಂತರ ಆಕೆ ಪತ್ತೆಯಾಗಿದ್ದರು. ಜೂ.11ರಂದು ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.





















































 
 
error: Content is protected !!
Scroll to Top