ಪುತ್ತೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು , ಕಬಕ ಗ್ರಾಮ ಪಂಚಾಯತ್ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ ಕಚೇರಿ ಮತ್ತು ವಿದ್ಯಾಪುರ ಅಂಗನವಾಡಿ ಕಟ್ಟಡ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಭಾಗವಹಿಸಿದರು
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಗ್ರಾಮ ಪಂಚಾಯತ್ ಅಧ್ಯಕ್ಷ ಸುಶೀಲ, ಉಪಾಧ್ಯಕ್ಷೆ ಗೀತಾ, ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರ ಕು ಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾ ಇ, ಪಂಚಾಯತ್ ಸದಸ್ಯರಾದ ವಿನಯ್ ಕುಮಾರ್, ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
























