ನವದೆಹಲಿ: CPI(M) ಆಡಳಿತದ ಕೇರಳದಲ್ಲಿ ಅಭಿವೃದ್ಧಿಗಿಂತ ಹೆಚ್ಚು ಕೇಡರ್ ಕಲ್ಯಾಣ ಕಾರ್ಯಕ್ರಮಗಳೇ ಹೆಚ್ಚಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ಕೇಡರ್ಗಳಿಗಿಂತ ಅಭಿವೃದ್ಧಿ ಹೊಂದಿದ ಕೇರಳವನ್ನು ಆಯ್ಕೆ ಮಾಡಿತು. ಭಾರತೀಯ ಜನತಾ ಪಕ್ಷಕ್ಕೆ ಅಭಿವೃದ್ಧಿಯೇ ಮುಖ್ಯ ಎಂದು ಅವರು ನುಡಿದಿದ್ದಾರೆ. ಬಿಜೆಪಿ ಮತ್ತು ಕಮ್ಯೂನಿಸ್ಟ್ ಪಕ್ಷಗಳ ನಡುವೆ ವ್ಯತ್ಯಾಸ ಇದ್ದು ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಿದರೆ, ಕಮ್ಯುನಿಸ್ಟ್ ಪಕ್ಷ ಕೇಡರ್ಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
LDF ಮತ್ತು UDF ಗಳು ಸಾಧನೆ ಮಾಡಿರುವುದು ಭ್ರಷ್ಟಾಚಾರದಲ್ಲಿ ಮಾತ್ರ ಎಂದ ಅವರು ಇದಕ್ಕೆ ಚಿನ್ನ ಕಳ್ಳ ಸಾಗಾಣಿಕೆ ಸೇರಿದಂತೆ ಇನ್ನಿತರ ಭ್ರಷ್ಟಾಚಾರಗಳನ್ನು ಉದಾಹರಿಸಿದರು. ಕೇರಳ ವಿಕಾಸವಾಗಬೇಕಾದರೆ ಬಿಜೆಪಿ ಬೇಕು. ಇಲ್ಲವಾದಲ್ಲಿ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ಬಿಜೆಪಿಗೆ ಮತ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
























