ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಜಿಲ್ಲೆಯಲ್ಲಾಗುತ್ತಿರುವ ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮರಳು ನೀತಿ ಮಾಡುವುದಾಗಿ ಹೇಳಿದ್ದು, ಆ ಭರವಸೆಯನ್ನು ಈ ವರೆಗೆ ಈಡೇರಿಸಿಲ್ಲ. ಇದರಿಂದಾಗಿ ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ವ್ಯಾಪಾರಸ್ಥರು ಸಹ ಸಮಸ್ಯೆ ಅನುಭವಿಸುವ ಹಾಗಾಗಿದೆ. ಜೊತೆಗೆ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡವರಿಗೂ ಕಲ್ಲು, ಮರಳಿನ ಸಮಸ್ಯೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top