ಬೈಂದೂರು: ಗೋ ಕಳ್ಳರಿಬ್ಬರನ್ನು ಬಂಧಿಸಿ, ದನಗಳ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಕೈಫ್ ಸಸ್ತಾನ ಮತ್ತು ಸುಹೇಲ್ ಖಾದರ್ ಉಚ್ಚಿಲ ಎಂದು ಗುರುತಿಸಲಾಗಿದೆ.
ಆರೋಪಿಗಳು ಕಾರು ಬಳಸಿ ನಾಲ್ಕು ದನಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿ, ಗೋಶಾಲೆಗೆ ಒಪ್ಪಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದಿರುವುದಾಗಿದೆ.
























