ಪುತ್ತೂರು: ಬನ್ನೂರಿನ ಅಲುಂಬುಡದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ತರಗತಿಯನ್ನು ಉದ್ಘಾಟಿಸಲಾಯಿತು.

ಕನ್ನಡ , ತುಳು ಸಿನಿಮಾ ಹಾಗೂ ಕಿರುತೆರೆ ನಟ ಪುತ್ತೂರಿನ ಪ್ರಸನ್ನ ಬಾಗಿನ ಬಪ್ಪಳಿಗೆ ಜ್ಯೋತಿ ಬೆಳಗಿಸಿ ಯಕ್ಷಗಾನ ತರಗತಿ ಉದ್ಘಾಟಿಸಿ ಮಾತನಾಡಿ, ಇಂದು ಯಕ್ಷಗಾನ ವಿಶ್ವ ಮಾನ್ಯವಾಗಿದೆ. ಮಕ್ಕಳಲ್ಲಿ ಎಳವೆಯಿ೦ದಲೇ ಇದರ ಕಲಿಕೆ ಆರಂಭವಾದರೆ ಅವರು ಮುಂದಕ್ಕೆ ಈ ಕ್ಷೇತ್ರದಲ್ಲಿ ಸಮರ್ಥವಾಗಿ ಬೆಳೆಯಲು ಸಾಧ್ಯ, ಇದೊಂದು ದೃಶ್ಯ ಹಾಗೂ ಶ್ರಾವ್ಯಕ್ಕೆ ಸಂಬಂಧಪಟ್ಟ ಕಲೆಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಮಾತನಾಡಿ, ಮಕ್ಕಳು ಆಸಕ್ತಿಯಿಂದ ಕಲಿತು ಮುಂದಕ್ಕೆ ಪ್ರತಿಭಾನ್ವಿತ ಕಲಾವಿದರಾಗಬೇಕು ಹಾಗೂ ಇದರ ಅಭಿರುಚಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕಿವಿ ಮಾತನ್ನು ಹೇಳಿದರು.
ಯಕ್ಷಗಾನ ಗುರು ಬಾಲಕೃಷ್ಣ ಉಡ್ಡ೦ಗಳ ಮಕ್ಕಳ ಕಲಿಕೆ ಬಗ್ಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಯಕ್ಷಗಾನ ಭಾಗವತ ಸತೀಶ್ ಇರ್ದೆ ಶಾಲೆ ಹಾಗೂ ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಯಕ್ಷಗಾನವನ್ನು ವಿಶ್ವಗಾನವನ್ನಾಗಿ ಮಾಡೋಣ ಎಂದು ಶುಭ ಕೋರಿದರು.
ವೇದಿಕೆಯಲ್ಲಿ ಶಾಲಾ ಸಂಚಾಲಕ ಎ.ವಿ. ನಾರಾಯಣ, ಶಾಲಾ ಆಡಳಿತ ಅಧಿಕಾರಿ ಗುಡ್ಡಪ್ಪಗೌಡ ಬಲ್ಯ, ಮುಖ್ಯ ಶಿಕ್ಷಕ ಅಮರ್ ನಾಥ್ ಉಪಸ್ಥಿತರಿದ್ದರು.,ಶಿಕ್ಷಕಿಯಾದ ಹರ್ಷಿತ ವಂದಿಸಿದರು. ಶಿಕ್ಷಕಿ ಸುಚಿತಾ ನಿರೂಪಿಸಿದರು. ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
























