ಭೂಮಿಗೆ ಮರಳಿದ ಶುಭಾಂಶು ಶುಕ್ಲಾ : ಪ್ರಧಾನಿ ಮೋದಿ ಹರ್ಷ

ನವದೆಹಲಿ: ಬಾಹ್ಯಾಶಕ್ಕೆ ಕಳೆದ ಜು. 25 ರಂದು ತೆರಳಿದ್ದ ‌ಭಾರತದ ಶುಭಾಂಶು ಶುಕ್ಲಾ ಅವರನ್ನೊಳಗೊಂಡ ನಾಲ್ವರ ‌ತಂಡ ಇಂದು ಅಪರಾಹ್ನ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ಇಡೀ ದೇಶದೊಂದಿಗೆ ಸೇರುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಶುಭಾಂಶು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದಿಂದ ಶತಕೋಟಿ ಕನಸುಗಳಿಗೆ ಸ್ಫೂರ್ತಿ ನೀಡಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲು ಎಂದು ಹೇಳಿದ್ದಾರೆ.





















































 
 
error: Content is protected !!
Scroll to Top