ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್‍ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ

ಸವಣೂರು: ಕಡಬ ತಾಲೂಕಿನ ಸವಣೂರು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ದಿನವಾದ ಬುಧವಾರ ಸಂಕ್ರಾಂತಿ ತಂಬಿಲ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪಾಲ್ಗೊಂಡಿದ್ದರು.

ಬೆಳಿಗ್ಗೆ ಗಾಲಿ ಜನಾರ್ದನ ರೆಡ್ಡಿ ಅವರು 2023-24ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸವಣೂರು ಆರೇಲ್ತಡಿಯಲ್ಲಿ ನಿರ್ಮಾಣಗೊಂಡ ಕೆಡೆಂಜೊಡಿತ್ತಾಯಿ ಬಸ್‍ ತಂಗುದಾಣವನ್ನು ಉದ್ಘಾಟಿಸಿದರು. ಬಳಿಕ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಂಕ್ರಾಂತಿ ತಂಬಿಲ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್‍ ಕಟೀಲ್‍, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈವಸ್ಥಾನದ ಅಧ್ಯಕ್ಷ ದಿನೇಶ್‍ ಮೆದು ಜನಾರ್ದನ ರೆಡ್ಡಿಯವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಸುಮನ ಮುರಳಿಮೋಹನ ಶೆಟ್ಟಿ, ಶಿವಪ್ರಸಾದ್‍ ಶೆಟ್ಟಿ ಕಿನಾರ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪಟ್ಟೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್‍ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್‍ ಪಿ.ಬಿ., ಜೀರ್ಣೋದ್ಧಾರ ಸಮಿತಿ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.





















































 
 
error: Content is protected !!
Scroll to Top