ಸುಳ್ಯ: ಗೂನಡ್ಕ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ನಡೆದಿದೆ.
ಸಂಪಾಜೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಕಾರು ಗೂನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸಮೀಪದಲ್ಲಿದ್ದ ರಹೀಂ ಬೀಜದಕಟ್ಟೆ ಅವರ ಮನೆಯ ಕಾಂಪೌಂಡಿಗೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ.
ಕಾರಿನಲ್ಲಿ ಕೇರಳದ ಕಾಸರಗೋಡು ಮೂಲದವರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
























