ಮೂರು ತಿಂಗಳು ಮೀನುಗಾರಿಕೆ ನಿಷೇಧಕ್ಕೆ ಚಿಂತನೆ

ಮತ್ಸ್ಯ ಸಂಪತ್ತು ಉಳಿಸುವ ಸಲುವಾಗಿ ಹೊಸ ನಿಯಮ

ಮಂಗಳೂರು: ಕಡಲಲ್ಲಿ ಮತ್ಸ್ಯ ಸಂಪತ್ತು ಬರಿದಾಗುತ್ತಿದೆ ಎನ್ನುವುದು ಇತ್ತೀಚೆಗೆ ವ್ಯಾಪಕವಾಗಿ ಕೇಳಿ ಬರುತ್ತಿರುವ ಆತಂಕ. ಹೀಗಾಗಿ ಮೀನು ಸಂತಾನೋತ್ಪತ್ತಿ ಕಾಲದಲ್ಲಿ ಯಾಂತ್ರೀಕೃತ ಬೋಟ್‌ಗಳು ಕಡಲಿಗೆ ಇಳಿಯದಿದ್ದರೆ ಮತ್ಸ್ಯ ಸಂಪತ್ತು ಹೇರಳವಾಗಿ ಸಿಗಲಿದೆ ಎಂಬುದು ಲೆಕ್ಕಚಾರ. ಈ ಕಾರಣಕ್ಕೆ ಮಳೆಗಾಲದಲ್ಲಿ ಎರಡು ತಿಂಗಳು ಮೀನಿಗಾರಿಕೆಗೆ ನಿಷೇಧ ಹೇರಲಾಗುತ್ತಿದೆ. ಆದರೆ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಅವಧಿಯಲ್ಲಿ ನಿಷೇಧ ಜಾರಿಗೆ ಬರುವುದರಿಂದ ನಿಷೇಧದ ನೈಜ ಉದ್ದೇಶ ಈಡೇರುತ್ತಿಲ್ಲ.

ಹೀಗಾಗಿ ಇಡೀ ದೇಶದಲ್ಲಿ ಒಂದೇ ಅವಧಿಯ ಮೀನುಗಾರಿಕೆ ನಿಯಮ ಜಾರಿಗೆ ಕೇಂದ್ರ ಚಿಂತನೆ ನಡೆಸಿದ್ದು, ಇದರ ಜೊತೆ ನಿಷೇಧದ ಅವಧಿಯೂ ವಿಸ್ತರಣೆಯಾಗುವ ಸಾಧ್ಯತೆಯಿದೆ.





















































 
 

ಸದ್ಯ ಕರ್ನಾಟಕ ಕರಾವಳಿಯಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಅಂದರೆ ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧದ ಅವಧಿ ಜಾರಿಯಲ್ಲಿದೆ. ಆದರೆ ಪಶ್ಚಿಮ ಕರಾವಳಿಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ಗೋವಾ, ಗುಜರಾತ್, ತಮಿಳುನಾಡಿನಲ್ಲಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ವ್ಯತ್ಯಾಸವಿದೆ. ಹೀಗಾಗಿ ಏಕರೂಪದ ನಿಯಮ ಜಾರಿ ಜೊತೆಗೆ ಮೂರು ತಿಂಗಳವರೆಗೆ ನಿಷೇಧದ ಅವಧಿ ವಿಸ್ತರಿಸುವ ಚಿಂತನೆ ನಡೆಸಲಾಗುತ್ತಿದೆ.

ಜೂನ್, ಜುಲೈ, ಆಗಸ್ಟ್ ವೇಳೆಗೆ ಮೀನುಗಳು ಸಂತಾನೋತ್ಪತ್ತಿಯ ಸಮಯ. ಇಂತಹ ಸಂದರ್ಭದಲ್ಲಿ ಯಾಂತ್ರೀಕೃತ ಬೋಟ್‌ಗಳು ಸಮುದ್ರಕ್ಕೆ ಇಳಿದರೆ ಸಣ್ಣ ಮೀನುಗಳು ಬಲೆಗೆ ಬಿದ್ದು, ಭವಿಷ್ಯದಲ್ಲಿ ಮತ್ಸ್ಯ ಸಂಕುಲಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ದೇಶದಲ್ಲಿ ಈ ಮೂರು ತಿಂಗಳು ಏಕರೂಪದ ನಿಯಮ ಜಾರಿಯ ಬಗ್ಗೆ ಚಿಂತನೆ ನಡೆದಿದೆ.

error: Content is protected !!
Scroll to Top