ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಡ್ರಗ್ಸ್‌, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಧಾರ

ಬೆಂಗಳೂರು: ಕಾಲೇಜುಗಳಲ್ಲಿ ಡ್ರಗ್ಸ್‌, ರ‍್ಯಾಗಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಆದೇಶ ಮಾಡಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್, ಡ್ರಗ್ಸ್ ಚಟುವಟಿಕೆಗಳು, ಲೈಂಗಿಕ ಕಿರುಕುಳ ಪ್ರಕರಣಗಳು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ.





















































 
 

ಉನ್ನತ ಶಿಕ್ಷಣ ಇಲಾಖೆ ಆದೇಶ ಬೆನ್ನಲ್ಲೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಕಾಲೇಜುಗಳಲ್ಲಿ ಲಭ್ಯ ಇರುವ ಅನುದಾನದಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಜುಲೈ 21ರ ಒಳಗೆ ಸಿಸಿಟಿವಿ ಅಳವಡಿಕೆ ಬಗ್ಗೆ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಕಾಲೇಜು, ವಿವಿಗಳಲ್ಲಿ ಇತ್ತೀಚೆಗೆ ರ‍್ಯಾಗಿಂಗ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಇದನ್ನ ನಿಯಂತ್ರಣ ಮಾಡಲು, ಕಾಲೇಜುಗಳಲ್ಲಿ ಮತ್ತು ವಿವಿ ಕ್ಯಾಂಪಸ್‌ಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿರುವುದು ಹಾಗೂ ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದರ ಬಗ್ಗೆ ನಿಗಾ ಇಡಲು, ಕಾಲೇಜು, ವಿವಿಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ.

error: Content is protected !!
Scroll to Top