ಹಿಂದುಳಿದ ವರ್ಗದ ಅಭಿವೃದ್ಧಿ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಾಯಿ ಮಾತಿನ ಅಭಿವೃದ್ಧಿಯ ಘೋಷಣೆಯಿಂದ ದಲಿತರು, ಹಿಂದುಳಿದ ವರ್ಗದವರ ಹೊಟ್ಟೆ ತುಂಬುವುದಿಲ್ಲ. ಆದರೆ ಸಿಎಂ ‌ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂದು ತಿಳಿದುಕೊಂಡಿದ್ದಾರೆಂದು ‌ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ‌ಜೊತೆಗೆ ಮಾತನಾಡಿದ ಅವರು, ಸಿಎಂ ದಲಿತರ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಮೊದಲು ಅವರಿಗೆ ಮೀಸಲಿಟ್ಟ ಹಣವನ್ನು ನೀಡುವತ್ತ ಗಮನ ನೀಡಲಿ. ಹಿಂದುಳಿದ ವರ್ಗದವರನ್ನು ಅಭಿವೃದ್ಧಿ ಮಾಡುವುದಾಗಿ ಹೇಳುತ್ತಾರೆ. ಆದರೆ ಅವುಗಳ ಅಭಿವೃದ್ಧಿಗೆ ಮೀಸಲಿಟ್ಟ ಯೋಜನೆಗಳಿಗೆ ಹಣ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.

ದಲಿತರ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಕಡಿತ ಮಾಡುತ್ತಾರೆ. ಯಾರೋ ಅಧ್ಯಕ್ಷರಾದ ಮಾತ್ರಕ್ಕೆ ಏನೂ ಆಗುವುದಿಲ್ಲ. ಯಾವುದೇ ಜನಾಂಗ ಅಭಿವೃದ್ಧಿ ಆಗಬೇಕಾದರೆ ಅವುಗಳಿಗೆ ಸರಿಯಾದ ರೀತಿಯಲ್ಲಿ ಹಣ ಸಿಗಬೇಕು. ಕೇವಲ ಘೋಷಣೆ ಜನರ ಹೊಟ್ಟೆ ತುಂಬಿಸದು ಎಂದು ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top