ಪಹಲ್ಗಾಮ್‌ ದಾಳಿ ನಡೆಸಿದ ಉಗ್ರ ಸಂಘಟನೆ ಭಯೋತ್ಪಾದಕ ಪಟ್ಟಿಗೆ ಸೇರ್ಪಡೆ

ದಿ ರೆಸಿಸ್ಟೆನ್ಸ್ ಫ್ರಂಟ್ ಜಾಗತಿಕ ಉಗ್ರ ಸಂಘಟನೆ ಅಮೆರಿಕದಿಂದ ಪಟ್ಟಿಗೆ ಸೇರ್ಪಡೆ

ನವದೆಹಲಿ: ಏಪ್ರಿಲ್ 22ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯನ್ನು ಅಮೆರಿಕದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.





















































 
 

ಇಂದು ವಿದೇಶಾಂಗ ಇಲಾಖೆಯು ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ (ಎಫ್‌ಟಿಒ) ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ (ಎಸ್‌ಡಿಜಿಟಿ) ಎಂದು ಹೆಸರಿಸುತ್ತದೆ. ಲಷ್ಕರ್-ಎ-ತಯ್ಯಬ ಸಂಸ್ಥೆಯ ಭಾಗವಾಗಿರುವ ಟಿಆರ್‌ಎಫ್‌ ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. 2008ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ. ಭಾರತೀಯ ಭದ್ರತಾ ಪಡೆಗಳ ವಿರುದ್ಧದ ಹಲವಾರು ದಾಳಿಯ ಹೊಣೆಯನ್ನು ಟಿಆರ್‌ಎಫ್‌ ಹೊತ್ತುಕೊಂಡಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಭಯೋತ್ಪಾದನೆಯನ್ನು ಎದುರಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

error: Content is protected !!
Scroll to Top