ಪುತ್ತೂರು : ಬಡಗನ್ನೂರು ಗ್ರಾಮದ ದೇಯಿಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.16 ರಿಂದ 20 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಹೋತ್ಸವದ ಅಂಗವಾಗಿ ಮಾ.16 ಗುರುವಾರ ಸಂಜೆ 5.30 ರಿಂದ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ರಾತ್ರಿ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ನಾಳ ಅವರಿಂದ “ನಾಳದಪ್ಪೆ ಉಳ್ಳಾಲ್ತಿ” ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಮಾ.17 ಶುಕ್ರವಾರ ಬೆಳಿಗ್ಗೆ 6.30 ರಿಕಂದ ಶ್ರೀಖ ನಾರಿಕೇಳ ಗಣಪತಿ ಹೋಮ, ಗುರುಪೂಜೆ, ತೋರಣ ಮುಹೂರ್ತ, ನಾಗದೇವರ ಸಾನಿಧ್ಯದಲ್ಲಿ ಶುದ್ಧಿಹೋಮ, ಕಲಶಾಭಿಷೇಕ, ಆಶ್ಲೇಷ ಬಲಿ, ಪ್ರಸನ್ನ ಪೂಜೆ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ಸಾನಿಧ್ಯದಲ್ಲಿ ನವಕ ಪ್ರಧಾನ, 10.30 ಕ್ಕೆ ವೃಷಭ ಲಗ್ನ ಸುಮುಹೂರ್ತದಲ್ಲಿ ಧ್ವಜಾರೋಹಣ, ಪಂಚಕರ್ಮ ಸೇವೆ, ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ. ಸಂಜೆ 4 ರಿಂದ ಭಜನಾ ಸಂಕೀರ್ತನೆ,, 6.30 ರಿಂದ ಧೂಮಾವತಿ ಬಲಿ ಉತ್ಸವ, ಧರ್ಮ ಚಾವಡಿಯಲ್ಲಿ ಭಗವತಿ ಸೇವೆ, ಮಹಾಪೂಜೆ ನಡೆಯಲಿದೆ.
ಮಾ.18 ಶನಿವಾರ ಬೆಳಿಗ್ಗೆ 6.30 ರಿಂದ ಗಣಪತಿ ಹೋಮ, ಗುರುಪೂಜೆ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ಸಾನಿಧ್ಯದಲ್ಲಿ ಶುದ್ಧಕಲಶ ಹೋಮ, ಬೆಳಿಗ್ಗೆ 9 ರಿಂದ ಧೂಮಾವತಿ ನೇಮೋತ್ಸವ, ಮಧ್ಯಾಹ್ನ 12.30 ಕ್ಕೆ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 6 ರಿಂದ ಧೂಮಾವತಿ ಬಲಿ ಉತ್ಸವ, ಕಲ್ಲಾಲ್ಲಾಯ ನೇಮೋತ್ಸವ, , ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಕೊರತಿ ದೈವದ ನರ್ತನ ಸೇವೆ, ರಾತ್ರಿ 10 ಕ್ಕೆ ಕುಪ್ಪೆ ಪಂಜುರ್ಲಿ ನೇಮೋತ್ಸವ ಜರಗಲಿದೆ.
ಮಾ.19 ಭಾನುವಾರ ಬೆಳಿಗ್ಗೆ 5.30 ರಿಂದ ಗಣಹೋಮ, ಗುರುಪೂಜೆ, ಮೂಲಸ್ಥಾನ ಗರಡಿ, ಬೆಮ್ಮೆರೆಗುಂಡ ಸತ್ಯಧರ್ಮ ಚಾವಡಿಯಲ್ಲಿ ನವಕ ಕಲಶ ಪ್ರಧಾನ ಹೋಮ, ಅಲಂಕಾರ ಪೂಜೆ, 11 ರಿಂದ ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ, 12.30 ರಿಂದ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ 4.30 ಕ್ಕೆ ಮೂಲಸ್ಥಾನ ಗರಡಿಯಲ್ಲಿ ಶುದ್ಧಹೋಮ ಕಲಶ. 6 ರಿಂದ ಧೂಮಾವತಿ ಬಲಿ ಉತ್ಸವ, 7.30 ಕ್ಕೆ ಸತ್ಯಧರ್ಮ ಚಾವಡಿಯಲ್ಲಿ ದೀಪಾರಾಧನೆ, ಮಹಾಪೂಜೆ. 8 ರಿಂದ ಮೂಲಸ್ಥಾನ ಗರಡಿಯಲ್ಲಿ ಬೈದರ್ಕಳ ದರ್ಶನ ಸೇವೆ, 9 ರಿಂದ ಮೂಲಸ್ಥಾನ ಗರಡಿಯಿಂದ ಒಲಿಮದೆಯಿಂದ ಹೊರಡುವುದು, 10 ರಿಂದ ಸತ್ಯಧರ್ಮ ಚಾವಡಿಯಲ್ಲಿ ದೇಯಿಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ರಾತ್ರಿ 11 ರಿಂದ ದೇವಿ ಬೈದೇತಿಯ ಪ್ರಸಾದ ವಿತರಣೆ, ಬ್ರಹ್ಮಬೈದರ್ಕಳ ನೇಮೋತ್ಸವ, ಸಮಾಧಿಯಲ್ಲಿ ದೀಪಾರಾಧನೆ ನಡೆಯಲಿದೆ.
ಮಾ.20 ಸೋಮವಾರ ಬೆಳಿಗ್ಗೆ 5 ರಿಂದ ಗಣಹೋಮ, ಎಲ್ಲಾ ಸಾನಿಧ್ಯಗಳಲ್ಲಿ ಶುದ್ಧಿ ಕಲಶ ಹೋಮ, ಧ್ವಜಾರೋಹಣ, ಗುರುಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.