ಪತಿ – ಪತ್ನಿ ಕಲಹ: ಡಿಸೇಲ್ ಹಚ್ಚಿಕೊಂಡ ಪತ್ನಿ ಚಿಕಿತ್ಸೆ ಫಲಿಸದೆ ಸಾವು

ಪತಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಪತಿ ಮತ್ತು ಪತ್ನಿ ನಡುವೆ ನಡೆದ ಕಲಹದಿಂದ ಪತ್ನಿ ಡಿಸೇಲ್ ಸುರಿದು ಬೆಂಕಿ ಹಂಚಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪತಿಯನ್ನು ಬಂಧಿಸಲಾಗಿದೆ.

ಮೃತ ಮಹಿಳೆಯನ್ನು ಲಕ್ಕವಳ್ಳಿ ಗ್ರಾಮದ ಗಿರಿಜಾ(38) ಎಂದು ಗುರುತಿಸಲಾಗಿದೆ. ಪತಿ ಶ್ರೀಕಾಂತ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.





















































 
 

ಕಳೆದ 20 ದಿನಗಳ ಹಿಂದೆ ದಂಪತಿ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಪತ್ನಿ ಗಿರಿಜಾ ಮೈಮೇಲೆ ಡಿಸೇಲ್ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ತಕ್ಷಣವೇ ಆಕೆಯನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದು 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗಿರಿಜಾ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪತಿ ಶ್ರೀಕಾಂತ್‌ನನ್ನು ಆನಂದಪುರ ‌ಪೊಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

error: Content is protected !!
Scroll to Top