ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದಿಂದ ಪರಿಸರ ಕಾರ್ಯಕ್ರಮ ದೇಲಂತಬೆಟ್ಟು ಶಾಲೆಯಲ್ಲಿ ನಡೆಯಿತು.

ಒಕ್ಕೂಟ ಉಪಾದ್ಯಕ್ಷ ಚಂದ್ರಶೇಖರ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಜ್ಞಾನ ದೀಪ ಶಿಕ್ಷಕ ಶಶಾಂಕ್ ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಧ್ಯಾಪಕ ಉದಯ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪ, ಶಾಲಾ ಶಿಕ್ಷಕಿ ಸವಿತ, ಶೌರ್ಯವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ರವೀಶ, ಪುಟ್ಟಣ್ಣ, ಗಣೇಶ, ಚಂದ್ರಶೇಖರ, ಕುಶಾಲಪ್ಪ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಮಕ್ಕಳಿಗೆ ಸಸಿ ವಿತರಣೆ ಮಾಡಿ ಸಸಿಗಳನ್ನು ನೆಡಲಾಯಿತು.
























