ನವದೆಹಲಿ: ಉಗ್ರರು ಪಹಲ್ಗಾಮ್ನಲ್ಲಿ ನಡೆಸಿದ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ಗೆ ಪಿಒಕೆ ಮತ್ತು ಪಾಕ್ನ ಭಯೋತ್ಪಾದಕ ನೆಲೆಗಳನ್ನು, ಅಡಗುದಾಣಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಮುಂದುವರೆಸಿ ದಾಳಿಯ ಹಿಂದಿರುವ ಉಗ್ರರನ್ನು ನಾಶ ಮಾಡಬೇಕು. ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಚೀನಾದ ಪ್ರಭಾವ ಹೆಚ್ಚಾಗುತ್ತಿದೆ. ಇಲ್ಲಿ ಮಸೀದಿಗಳನ್ನು ಕೆಡಹುವ, ಮಸೀದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚೆಗಳಾಗುತ್ತಿವೆ. ಅದರ ಬದಲು ಪಾಕ್, ಚೀನಾದಿಂದ ಬರುವ ಬೆದರಿಕೆಗಳನ್ನು ಎದುರಿಸಲು ಕ್ರಮ ಕೈಗೊಳ್ಳಲು ಸಲಹೆ ನೀಡಿದ್ದಾರೆ.
























