ಆ.11ರಿಂದ 22ರ ತನಕ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು : ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆ.22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.

ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ.

ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಗಸ್ಟ್ 11ರಿಂದ 22ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಆ.15ರಂದು ಸ್ವಾತಂತ್ರ್ಯೋತ್ಸವದ ಕಾರಣ ರಜೆ ಇರಲಿದೆ. ಶನಿವಾರ ಮತ್ತು ಭಾನುವಾರ ಎಂದು ಮತ್ತೆರಡು ರಜೆಗಳು ಕಳೆದು ಎಂಟು ದಿನ ಮಾತ್ರ ಅಧಿವೇಶನ ನಡೆಯಲಿದೆ.





















































 
 
error: Content is protected !!
Scroll to Top