ಅಪಾರ ಎಕೆ 47 ರೈಫಲ್, ಸ್ಫೋಟಕ ಪತ್ತೆ
ರಾಯ್ಪುರ: ಛತ್ತೀಸ್ಗಢದ ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 6 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಲ್ಲಿ ಹಲವು ಎಕೆ 47 ಮತ್ತು ಎಸ್ಎಕ್ಆರ್ ರೈಫಲ್ಗಳು, ಸ್ಫೋಟಕಗಳು ಪತ್ತೆಯಾಗಿವೆ.
ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್ ಭದ್ರಕೋಟೆಯಾದ ಅಬುಜ್ಮದ್ ಕೋರ್ ವಲಯದಲ್ಲಿ ನಕ್ಸಲರ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್ಕೌಂಟರ್ ಸಹ ಒಂದಾಗಿದೆ. ಈ ಪ್ರದೇಶದಲ್ಲಿ ನಕ್ಸಲರ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕ, ಬಂದೂಕುಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ.
ಜೂನ್ 6ರಂದು ಛತ್ತೀಸ್ಗಢದ ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ತಲೆಗೆ 45 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಭಾಸ್ಕರ್ ಹತ್ಯೆಗೀಡಾಗಿದ್ದ.
























